ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ

206

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಿಸಬೇಕೆಂದು ಬಾಡಿಗೆ ವಾಹನ ಚಾಲಕರು ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದರು, ಅವರ ಹೋರಾಟಕ್ಕೆ ಸರ್ಕಾರ ಮಣಿದಿದೆ. ಸಾರಿಗೆ ಹಾಗೂ ರಸ್ತೆ ಸುರಕ್ಷತೆ ಆಯುಕ್ತರು, ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳನ್ನು ಯಾವುದೇ ಕಂಪನಿಗಳಿಗೆ ಬಾಡಿಗೆಗೆ ಬಿಡಬಾರದು. ಒಂದು ವೇಳೆ ವಾಣಿಜ್ಯ ಚಟುವಟಿಕೆಗಳಿಗೆ ಅದು ಬಳಕೆಯಾದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಆ್ಯಪ್ ಆಧರಿತ ಬೈಕ್, ಟ್ಯಾಕ್ಸಿ ಸೇವೆ ಬಂದ್ ಮಾಡಲಾಗಿದೆ. ಈಗಾಗ್ಲೇ 500 ಬೈಕ್ ವಶಪಡಿಸಿಕೊಳ್ಳಲಾಗಿದೆ. ಚಾಲಕರಿಗೆ 10,500 ರೂಪಾಯಿ ದಂಡ ವಿಧಿಸಲಾಗಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!