ಪ್ರಜಾಸ್ತ್ರ ಸುದ್ದಿ
ಹೈದರಾಬಾದ್: ಕಳೆದ ಸೆಪ್ಟೆಂಬರ್ 9ರಂದು ಸೈದಾಬಾದ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಈ ಘಟನೆ ದೇಶ್ಯಾದ್ಯಂತ ಸಾಕಷ್ಟು ಸುದ್ದಿ ಮಾಡಿತ್ತು. ಈ ಪ್ರಕರಣ ಆರೋಪಿಯ ಶವ ಪತ್ತೆಯಾಗಿದೆ.
ತೆಲಂಗಾಣ ಸ್ಟೇಷನ್ ಘನಪುರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಅತ್ಯಾಚಾರಿಯನ್ನು ಎನ್ ಕೌಂಟರ್ ಮಾಡಬೇಕು ಅನ್ನೋ ಕೂಗು ಕೇಳಿ ಬಂದಿತ್ತು. ಅಲ್ದೇ, ಪೊಲೀಸರು ಆತನ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.