ರಾಷ್ಟ್ರಪತಿ ಭವನದಲ್ಲಿ ಔತಣಕೂಟ: ಟ್ರಂಪ್ ಜೊತೆ ಗಣ್ಯರು ಭಾಗಿ

312

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್ ರಾಷ್ಟ್ರಪತಿ ಭವನ ತಲುಪಿದ್ದಾರೆ. ಇವರನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಪತ್ನಿ ಸ್ವಾಗತಿಸಿದ್ದಾರೆ. ಈ ವೇಳೆ ಇವರಿಬ್ಬರು ಮಾತುಕತೆ ನಡೆಸಿದ್ದಾರೆ.

ಟ್ರಂಪ್ ದಂಪತಿಗಾಗಿ ಭೋಜನ ವ್ಯವಸ್ಥೆ ಮಾಡಲಾಗಿದ್ದು, ಪ್ರಧಾನಿ, ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಸಿಎಂಗಳು ಇದರಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪನವರು ಸಹ ಔತಣಕೂಟದಲ್ಲಿ ಭಾಗವಹಿಸಿದ್ದಾರೆ. ಗಣ್ಯರೊಂದಿಗೆ ಟ್ರಂಪ್ ಭೋಜನ ಸವಿಯಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!