ಭಾರತಕ್ಕೆ ಮತ್ತೊಂದು ಪದಕ: ಕುಸ್ತಿಯಲ್ಲಿ ಬೆಳ್ಳಿ ಗೆದ್ದ ರವಿಕುಮಾರ

325

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಟೊಕಿಯೋ: ಟೊಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಬಂದಿದೆ. ಈ ಮೂಲಕ ಭಾರತೀಯರ ಪದಕ ಬೇಟೆ ಮುಂದುವರೆದಿದೆ. ಕುಸ್ತಿ ಫೈನಲ್ ಪಂದ್ಯದಲ್ಲಿ ರವಿಕುಮಾರ ದಹಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ.

ಫೈನಲ್ ಪಂದ್ಯದಲ್ಲಿ ಆರ್ ಒಸಿಯ ಜಾವೂರ್ ಉಗೆವ್ ವಿರುದ್ಧ 4-7ರಿಂದ ಸೋಲು ಅನುಭವಿಸಬೇಕಾಯ್ತು. ಹೀಗಾಗಿ ಚಿನ್ನದ ಪದಕ ಬದಲು ಬೆಳ್ಳಿಗೆ ತೃಪ್ತಿ ಪಡಬೇಕಾಗಿದೆ. ಈ ವೇಟ್ ಲಿಫ್ಟಿಂಗ್ ನಲ್ಲಿ ಚಾನು ಬೆಳ್ಳಿ ಗೆದ್ದ ಬಳಿಕ ಇದು ಎರಡನೇ ಬೆಳ್ಳಿ ಪದಕವಾಗಿದೆ.

ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಇದುವರೆಗೂ 5 ಪದಕಗಳು ಬಂದಿವೆ. ಬ್ಯಾಡ್ಮಿಂಟನ್ ನಲ್ಲಿ ಕಂಚು, ಹಾಕಿಯಲ್ಲಿ ಕಂಚು, ಬಾಕ್ಸಿಂಗ್ ನಲ್ಲಿ ಕಂಚು ಬಂದಿದೆ.




Leave a Reply

Your email address will not be published. Required fields are marked *

error: Content is protected !!