ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್

184

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂಡಿಯನ್ ಕ್ರಿಕೆಟ್ ಟೀಂ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ರಿವಾಬಾ ಜಡೇಜ್ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ.

160 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅದರಲ್ಲಿ ಜಾಮ್ ನಗರ ಉತ್ತರ ಕ್ಷೇತ್ರಕ್ಕೆ ರಿವಾಬ್ ಜಡೇಜ್ ಹೆಸರನ್ನು ಘೋಷಿಸಲಾಗಿದೆ. ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ ರಿವಾಬ್, 2016ರಲ್ಲಿ ರವೀಂದ್ರ ಜಡೇಜಾ ಅವರನ್ನು ಮದುವೆಯಾದರು. ರಜಪೂತ್ ಪರಂಪರೆಯನ್ನು ಇವರು ಹೊಂದಿದ್ದು, ಜಾಮ್ ನಗರ ಹಾಗೂ ಸೌರಾಷ್ಟ್ರದಲ್ಲಿ ಸಕ್ರಿಯ ರಾಜಕಾರಣಿಯಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪತಿ ರವೀಂದ್ರ ಜಡೇಜಾ, ಪತ್ನಿಯ ಭವಿಷ್ಯಕ್ಕೆ ಶುಭ ಕೋರಿದ್ದಾರೆ. ಇತ್ತೀಚೆಗೆ ಈ ಜೋಡಿ ಪ್ರಧಾನಿ ಮೋದಿ ಭೇಟಿಯಾಗಿದ್ದ ಫೋಟೋ ವೈರಲ್ ಆಗಿತ್ತು. ಮೊಣಕಾಲಿನ ಚಿಕಿತ್ಸೆಗೆ ಒಳಗಾಗಿರುವ ಜಡೇಜಾ ಟಿ-20 ವರ್ಲ್ಡ್ ಕಪ್ ಟೂರ್ನಿಯಿಂದ ಹೊರಗುಳಿದಿದ್ದಾರೆ.




Leave a Reply

Your email address will not be published. Required fields are marked *

error: Content is protected !!