ಎಟಿಎಂಗಳಲ್ಲಿ ಕಾರ್ಡ್ ಲೆಸ್ ಹಣದ ಸೌಲಭ್ಯ ಪ್ರಸ್ತಾಪ: ಶಕ್ತಿಕಾಂತ್ ದಾಸ್

197

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಆರ್ ಬಿಐ ಸತತವಾಗಿ 11ನೇ ಬಾರಿಗೆ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾನಿಟರಿ ಪಾಲಿಸಿ ಕಮಿಟಿ ಸಭೆಯ ಬಳಿಕ ಮಾತನಾಡಿದ ಶಕ್ತಿಕಾಂತ್ ದಾಸ್, ವೈಯಕ್ತಿಕ ಸಾಲ, ಗೃಹ ಸಾಲ, ಇಎಂಐನಲ್ಲಿ ಸಹ ಯಾವುದೇ ವ್ಯತ್ಯಾಸವಾಗಿಲ್ಲ. ಪ್ರಸ್ತುತ ರೆಪೊ ದರ ಶೇಕಡ 4ರಷ್ಟು ಇದೆ ಎಂದು ತಿಳಿಸಿದ್ದಾರೆ.

ಇನ್ನು ದೇಶದ ಎಲ್ಲ ಎಟಿಎಂಗಳಲ್ಲಿ ಕಾರ್ಡ್ ಲೆಸ್ ಕ್ಯಾಶ್ ಸೌಲಭ್ಯ ಕಲ್ಪಿಸುವ ಕುರಿತು ಪ್ರಸ್ತಾಪ ಇದೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ಮೂಲಕ ಸೌಲಭ್ಯ ಒದಗಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!