ಎಲ್ಲೆಡೆ ಸಂವಿಧಾನ ಪೀಠಿಕೆ ಓದು

165

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಹುತ್ವ ಭಾರತದಲ್ಲಿ ಸಮಾನತೆ, ಭ್ರಾತೃತ್ವದ ಮೌಲ್ಯಗಳನ್ನು ಸಾರುವ ಸಂವಿಧಾನದ ಪೀಠಿಕೆಯನ್ನು ಇಂದು ಎಲ್ಲೆಡೆ ಓದಲಾಯಿತು. ರಾಜ್ಯ ಸರ್ಕಾರದ ಆದೇಶದಂತೆ ಇಂದು ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಹಿಡಿದು ಎಲ್ಲೆಡೆ ಸಂವಿಧಾನ ಪೀಠಿಕೆ ಓದಲಾಯಿತು.

ವಿಶ್ವ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ಪ್ರತಿ ತಾಲೂಕು ಕೇಂದ್ರಗಳಲ್ಲಿ, ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಸಂವಿಧಾನ ಪೀಠಿಕೆ ಓದು ದಿನ ಆಚರಿಸಲಾಯಿತು. ಈ ಮೂಲಕ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಈ ದೇಶಕ್ಕೆ ಎಷ್ಟು ಮುಖ್ಯ ಅನ್ನೋ ಸಂದೇಶ ಸಾರಲಾಯಿತು.

ಇನ್ನು ವಿಧಾನಸೌಧ ಮುಂಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಸಂವಿಧಾನ ಪೀಠಿಕೆ ಓದಲಾಯಿತು. ಇದಕ್ಕಾಗಿ ನೋಂದಾಯಿಸಿಕೊಳ್ಳು ರಾಜ್ಯ ಸರ್ಕಾರ ಘೋಷಣೆ ಮಾಡಿತು. ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಮಾಜ ಕಲ್ಯಾಣ ಖಾತೆ ಸಚಿವ ಹೆಚ್.ಸಿ ಮಹಾದೇವಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!