ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಹತ್ಯೆ

134

ಪ್ರಜಾಸ್ತ್ರ ಅಪರಾಧ ಸುದ್ದಿ

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಇಬ್ಬರ ಹತ್ಯೆಯಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ನಗರದ ಕಮಲಾಪುರ ಹೊರವಲಯದಲ್ಲಿ ಹತ್ಯೆ ಮಾಡಲಾಗಿದೆ.

ಮೊಹಮ್ಮದ್ ಕುಡಚಿ ಹತ್ಯೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಮನೆ ಮುಂದೆ ಕುಳುತ್ತಿದ್ದಾಗ ದುಷ್ಕರ್ಮಿಗಳ ತಂಡವೊಂದು ದಾಳಿ ಮಾಡಿ ಕೊಲೆ ಮಾಡಿದೆ. ಇನ್ನು ಕೊಲೆಯಾದ ಮೊಹಮ್ಮದ್ ಕುಡಚಿ ಮನೆಯಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದ್ದು, ಹೆಸರು ತಿಳಿದು ಬಂದಿಲ್ಲ.

ಧಾರವಾಡ ಉಪ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!