ಟಾಲಿವುಡ್ ರೆಬಲ್ ಸ್ಟಾರ್ ಕೃಷ್ಣಂ ರಾಜು ನಿಧನ

271

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಹೈದರಾಬಾದ್: ಟಾಲಿವುಡ್ ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ಅವರ ಚಿಕ್ಕಪ್ಪನಾಗಿರುವ ಕೃಷ್ಣಂ ರಾಜು ಅವರಿಗೆ 82 ವರ್ಷ ವಯಸ್ಸಾಗಿತ್ತು.

ಇದುವರೆಗೂ ಅವರು 183ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಐದು ಬಾರಿ ಫಿಲ್ಮ್ ಫೇರ್ ಪ್ರಶಸ್ತಿ, ಮೂರು ಬಾರಿ ನಂದಿ ಪ್ರಶಸ್ತಿ ಪಡೆದಿದ್ದಾರೆ. ಜೊತೆಗೆ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದ ಇವರು, ಬಿಜೆಪಿಯಿಂದ ಕಾಕಿನಾಡ, ನರಸಾಪುರಂ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿದ್ದರು. 1999ರಿಂದ 2004ರ ತನಕ ವಾಜಪೇಯಿ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವರಾಗಿದ್ದರು.




Leave a Reply

Your email address will not be published. Required fields are marked *

error: Content is protected !!