ಇಂದಿನಿಂದ ಯಲ್ಲಮ್ಮ ತಾಯಿ ದರ್ಶನಕ್ಕೆ ಅವಕಾಶ

239

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ರಾಜ್ಯದ ಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಸ್ಥಾನದ ಬಾಗಿಲು ಇಂದಿನಿಂದ ತೆರೆಯಲಾಗಿದೆ. ಈ ಮೂಲಕ ಕಳೆದ 18 ತಿಂಗಳ ಬಳಿಕ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್ 19 ಸೋಂಕಿನಿಂದಾಗಿ ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು. ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ರೇಣುಕಾ ಯಲ್ಲಮ್ಮನ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಇಂದಿನಿಂದ ಬಾಗಿಲು ತೆರೆಯಲಾಗಿದ್ದು, ಭಕ್ತರು ತಾಯಿಯ ದರ್ಶನ ಪಡೆಯಬಹುದು.




Leave a Reply

Your email address will not be published. Required fields are marked *

error: Content is protected !!