ಒಂದು ವರ್ಷದಲ್ಲಿ ಪ್ರತಿ ಗ್ರಾಮದ ಮನೆಗೆ ನೀರಿನ ಸಂಪರ್ಕ: ಶಾಸಕ ಭೂಸನೂರ

264

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ತಹಶೀಲ್ದಾರ್ ಸಂಜೀವಕುಮಾರ ದಾಸರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಶಾಸಕ ರಮೇಶ ಭೂಸನೂರ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಸೇರಿ ಇತರರು ಭಾಗವಹಿಸಿದ್ದರು.

ಅಧ್ಯಕ್ಷೀಯ ಭಾಷಣ ಮಾಡಿದ ಶಾಸಕ ಭೂಸನೂರ, ಏಳು ದಶಕಗಳ ಹಾದಿ ಹಾಗೂ ಮುಂದೆ ಸಾಗಬೇಕಾದ ಹಾದಿಯ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕಿದೆ. ಏಳುಬೀಳಿನ ಹಾದಿಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಇನ್ನು ಹೆಚ್ಚಿನ ಸಾಧನೆ ಮಾಡಬೇಕಿದೆ ಎಂದರು. ಮುಂದಿನ ಒಂದು ವರ್ಷದಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುವುದು. ಸಿಂದಗಿ ಪಟ್ಟಣಕ್ಕೆ 24 ಗಂಟೆ ನೀರಿನ ಸಂಪರ್ಕ ಕಲ್ಪಿಸುವ ಸಂಬಂಧ 93 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು ಎಂದರು.

ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿದರು. ತಹಶ್ಲೀದಾರ ಸಂಜೀವಕುಮಾರ ದಾಸರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಪಿಎಂಸಿ ಅಧ್ಯಕ್ಷ ಸಿದ್ದಣ್ಣ ಹಿರೇಕುರುಬರ, ಉಪಾಧ್ಯಕ್ಷ ಪ್ರಕಾಶ ಪಡಶೆಟ್ಟಿ, ಪುರಸಭೆ ಉಪಾಧ್ಯಕ್ಷ ಹಾಸೀಂಪೀರ ಆಳಂದ, ತಾ.ಪಂ ಇಒ ಕೆ.ಹೊಂಗಯ್ಯ, ಸಿಪಿಐ ರವಿ ಉಕ್ಕಂದ, ಬಿಇಒ ಹಣಮಂತ್ರಾಯ ಹರನಾಳ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ಸೇರಿ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!