ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ದಿಂಗಾಲೇಶ್ವರ ಸ್ವಾಮೀಜಿಗೆ ಮನವಿ: ಸಿಎಂ ಸಿದ್ದರಾಮಯ್ಯ

65

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಜಾತ್ಯಾತೀತ ಮತಗಳು ವಿಭಜನೆಯಾಗದಂತೆ ತಡೆಯಲು ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಮನವಿ ಮಾಡಿದ್ದೇವೆ. ಅವರು ನಮಗೆ ಸ್ಪಂದಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ತರೀಕೆರೆಗೆ ತೆರಳು ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಸೇರಿದಂತೆ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಎಂದರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಈಶ್ವರಪ್ಪ ಹೇಳಿದ್ದಾರೆ ಎನ್ನುವ ಪ್ರಶ್ನೆಗೆ, ಅವರ ಮೆದುಳು ನಾಲಿಗೆಗೆ ಲಿಂಕ್ ತಪ್ಪಿದೆ ಎಂದರು.

ಇನ್ನು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಹಾಗೂ ಶೀಘ್ರ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗುವುದು. ನೇಹಾ ಕುಟುಂಬದ ಜೊತೆಗೆ ನಮ್ಮ ಸರ್ಕಾರವಿದೆ ಅಂತಾ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!