ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ

310

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಹಾಗೂ ಸದಸ್ಯ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಜೊತೆಗೆ ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.

ಸಭಾಪತಿ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪರಿಷತ್ ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ನಾಳೆ ಬಿಜೆಪಿ ಸೇರಲಿದ್ದೇನೆ ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಇನ್ನು ನಿಯಮದ ಪ್ರಕಾರ ಸಭಾಪತಿ ರಾಜೀನಾಮೆ ಪತ್ರವನ್ನು ಉಪ ಸಭಾಪತಿಯವರಿಗೆ ಸಲ್ಲಿಸಬೇಕು. ಆದರೆ, ಉಪ ಸಭಾಪತಿ ಸ್ಥಾನ ಖಾಲಿ ಇರುವುದರಿಂದ ಪರಿಷತ್ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!