ನಾಗಠಾಣ ಕ್ಷೇತ್ರದಿಂದ ಸ್ಪರ್ಧಿಸಲು ಪೊಲೀಸ್ ಕೆಲಸಕ್ಕೆ ರಾಜೀನಾಮೆ!

267

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬಾಗಲಕೋಟೆಯಲ್ಲಿ ಲೋಕಾಯುಕ್ತ ಸಿಪಿಐ ಆಗಿ ಕಾರ್ಯನಿರ್ವಹಿಸುತ್ತಿರುವ ಮಹೇಂದ್ರಕುಮಾರ ನಾಯಿಕ ಎಂಬುವರು ತಮ್ಮ ಕೌಟುಂಬಿಕ ಕಾರಣಗಳಿಂದಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ತಮಗೆ ಕೆಲಸದಿಂದ ಬಿಡುಗಡೆಗೊಳಿಸಬೇಕು ಎಂದು ಹಿರಿಯ ಅಧಿಕಾರಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಪೊಲೀಸ್ ಅಧಿಕಾರಿ ಕೌಟುಂಬಿಕ ಕಾರಣಗಳನ್ನು ರಾಜೀನಾಮೆ ಪತ್ರದಲ್ಲಿ ನೀಡಿದ್ದರೂ, ಇವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ನಾಗಠಾಣ ಎಸ್ಸಿ ಮೀಸಲು ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ನಾಗಠಾಣ ಕ್ಷೇತ್ರದಿಂದ ಸಚಿವ ಗೋವಿಂದ ಕಾರಜೋಳ ಪುತ್ರ ಗೋಪಾಲ ಕಾರಜೋಳ ಸಹ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಯಾರಿಗೆ ಟಿಕೆಟ್ ಸಿಗುತ್ತಾ ಕಾದು ನೋಡಬೇಕು.

ಇನ್ನು ಪೊಲೀಸ್ ಅಧಿಕಾರಿ ಮಹೇಂದ್ರಕುಮಾರ ನಾಯಿಕ ಕೌಟುಂಬಿಕ ಕಾರಣಗಳಿಗೆ ರಾಜೀನಾಮೆ ಸಲ್ಲಿಸಿದ್ದಾ ಅಥವ ಈಗ ಕೇಳಿ ಬರುತ್ತಿರುವ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ರಾಜೀನಾಮೆ ಕೊಟ್ಟಿದ್ದಾ ಅನ್ನೋದು ಮುಂದಿನ ದಿನಗಳಲ್ಲಿ ತಿಳಿಯಲಿದೆ.




Leave a Reply

Your email address will not be published. Required fields are marked *

error: Content is protected !!