ರೆಸ್ಟೋರೆಂಟ್, ಹೋಟೆಲ್ ತೆರೆಯಲು ಅನುಮತಿ

281

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದಾಗಿ ಕಳೆದ ಎರಡೂವರೆ ತಿಂಗಳಿನಿಂದ ಬಂದ್ ಆಗಿದ್ದ ರೆಸ್ಟೋರೆಂಟ್, ಹೋಟೆಲ್ ತೆರೆಯಲು ಅನುಮತಿ ನೀಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ರೆಸ್ಟೋರೆಂಟ್, ಹೋಟೆಲ್ ಗಳಿಗೆ ಅವಕಾಶ ನೀಡಲಾಗ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಾತ್ನಾಡಿದ ಅವರು, ಈಗಾಗ್ಲೇ ನಿಗಧಿ ಮಾಡಿರುವ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ರು. ಇದಕ್ಕೆ ಹೋಟೆಲ್ ಸಂಘಗಳ ಪ್ರತಿನಿಧಿಗಳು ಒಪ್ಪಿಕೊಂಡಿದ್ದಾರೆ. ಇನ್ನು ಇದೇ ವೇಳೆ ಖಾಸಗಿ ಬಸ್, ಟ್ಯಾಕ್ಸಿ, ಪ್ರವಾಸಿ ತಾಣಗಳಲ್ಲಿರುವ ಆತಿಥ್ಯ ಹೋಟೆಲ್ ಗಳ ಸಂಘದವರು ಸಹ ಬೇಡಿಕೆಗಳನ್ನ ಇಟ್ಟಿದ್ದಾರೆ.

ಅವರ ಬೇಡಿಕೆಗಳನ್ನ ಪರಿಶೀಲನೆ ಮಾಡಿ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ರು. ಈ ವೇಳೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ, ನಟಿ ಶ್ರುತಿ ಸೇರಿದಂತೆ ಕೆಲವರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!