‘ರೇವಣ್ಣನನ್ನು ಬಂಧಿಸಿದ್ದೇವೆ, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ತಾಕತ್ ಇದ್ಯಾ’

85

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹೆಚ್.ಡಿ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ತಾಕತ್ ನಿಮಗಿದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಬರೆದಿರುವ ಅವರು, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಶೇಷ ತನಿಖಾ ದಳದ ಮೂಲಕ ಪಾರದರ್ಶಕ ತನಿಖೆಗೆ ಒಳಪಡಿಸಿ ನೊಂದವರ ಕಣ್ಣೀರುವ ಒರೆಸುವ ಪ್ರಯತ್ನವನ್ನು ಒಂದು ಸರ್ಕಾರವಾಗಿ ನಾವು ಮಾಡಿದ್ದೇವೆ. ಮಹಿಳೆಯರ ಬಗ್ಗೆ ಮೊಸಳೆ ಕಣ್ಣಿರು ಸುರಿಸುವ ಪ್ರಧಾನಿ ಮೋದಿ ಅವರೇ ಈಗ ನಿಮ್ಮ ಸರದಿ ಎಂದಿದ್ದಾರೆ.

ಬ್ರಿಜ್ ಭೂಷಣ್ ಸಿಂಗ್, ಕುಲ್ ದೀಪ್ ಸೆಂಗರ್ ನಂತಹ ಮಹಿಳಾ ಪೀಡಕರು ಮಾಡಿರುವ ಪಾಪಕ್ಕೆ ತಕ್ಕ ಶಿಕ್ಷೆಯಾಗುವಂತೆ ಮಾಡಿ. ಇಲ್ಲದಿದ್ದರೆ ನಿಮ್ಮ ಆತ್ಮಸಾಕ್ಷಿಯೂ ನಿಮ್ಮನ್ನು ಕ್ಷಮಿಸಲಾರದು ಎಂದು ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!