ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ ಮುಂದೂಡಿಕೆ

73

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂದನಕ್ಕೆ ಒಳಗಾಗಿರುವ ಜೆಡಿಎಸ್ ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ ಮುಂದೂಡಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ಗುರುವಾರ ನಡೆಯಿತು. ರೇವಣ್ಣ ಪರ ವಕೀಲ ಸಿ.ವಿ ನಾಗೇಶ್ ವಾದ ಮಾಡಿ, ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣ ಪಾತ್ರವಿಲ್ಲ. ಐಪಿಸಿ ಸೆಕ್ಷನ್ 364ರ ಅಡಿಯಲ್ಲಿ ಕೇಸ್ ದಾಖಲಿಸುವ ಅಗತ್ಯವಿರಲಿಲ್ಲವೆಂದು ಹೇಳಿದ್ದಾರೆ.

ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಜಯ್ನಾ ಕೊಠಾರಿ ವಾದ ಮಂಡಿಸಲು ಅವಕಾಶ ಕೇಳಿದರು. ನ್ಯಾಯಮೂರ್ತಿ ಸಂತೋಷ್ ಗಜಾನನ್ ಭಟ್ ಪ್ರಕರಣವನ್ನು ಸೋಮವಾರಕ್ಕೆ ಮುಂದೂಡಿದರು.




Leave a Reply

Your email address will not be published. Required fields are marked *

error: Content is protected !!