ರೇವಂತ್ ರೆಡ್ಡಿ ತೆಲಂಗಾಣ ನೂತನ ಸಿಎಂ?

186

ಪ್ರಜಾಸ್ತ್ರ ಸುದ್ದಿ

ಹೈದ್ರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಸಿಎಂ ಆಗಿ ಡಿಸೆಂಬರ್ 7ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಸಿಎಲ್ ಪಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ರೇವಂತ್ ರೆಡ್ಡಿ ಪರ ಎಲ್ಲರೂ ಒಲವು ತೋರಿಸಿದ್ದಾರಂತೆ. ಹೈಕಮಾಂಡ್ ಗೆ ಹೆಸರನ್ನು ಕಳಿಸಲಾಗಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ.

ಈ ಮೂಲಕ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ಇದರೊಂದಿಗೆ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣದ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಆಯ್ಕೆ ಮಾಡಲು ಸಜ್ಜಾಗಿದೆ.




Leave a Reply

Your email address will not be published. Required fields are marked *

error: Content is protected !!