ಹೈಕಮಾಂಡ್ ನಾಯಕರನ್ನು ಭೇಟಿಯಾದ ರೇವಂತ್ ರೆಡ್ಡಿ

167

ಪ್ರಜಾಸ್ತ್ರ ಸುದ್ದಿ

ನವದೆಹಲಿ: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿರುವ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಇಂದು ಹೈಕಮಾಂಡ್ ನಾಯಕರನ್ನು ಭೇಟಿಯಾದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದರು. ಮಲ್ಕಜೆಗಿರಿ ಲೋಕಸಭಾ ಸಂಸದರಾಗಿರುವ ರೇವಂತ್ ರೆಡ್ಡಿ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರಂತೆ.

ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಗಳಿಸಿದ್ದಾರೆ. ಗುರುವಾರ ಹೈದ್ರಾಬಾದ್ ನಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೆಲವರು ಸಚಿವರಾಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!