ಕ್ಯಾಂಟರ್, ಆಟೋ ಅಪಘಾತ: ವಿದ್ಯಾರ್ಥಿಗಳಿಗೆ ಗಾಯ

105

ಪ್ರಜಾಸ್ತ್ರ ಸುದ್ದಿ

ಚಿಕ್ಕಬಳ್ಳಾಪುರ: ಕ್ಯಾಂಟರ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಗೌರಿಬಿದನೂರಿನ ನಾಗಪ್ಪ ಬ್ಲಾಕ್ ಬೈಪಾಸ್ ಹತ್ತಿರ ನಡೆದಿದೆ. ಇದರಿಂದಾಗಿ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ವಿದುರಾಶ್ವತ್ಥ ಕಡೆಯಿಂದ ಬರುತ್ತಿದ್ದ ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಹೀಗಾಗಿ ಆಟೋ ಚಾಲಕ ಸೇರಿ 10ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.




Leave a Reply

Your email address will not be published. Required fields are marked *

error: Content is protected !!