ಸಿಂದಗಿಯಲ್ಲಿ ಹೊತ್ತಿ ಉರಿದ ಮದ್ಯದ ವಾಹನ

83

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಹೊರವಲಯದ ಸಿಂದಗಿ-ಜೇವರ್ಗಿ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಸ್ಪಿರಿಟ್ ತುಂಬಿದ ವಾಹನವೊಂದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಇಡೀ ವಾಹನ ಸುಟ್ಟು ಭಸ್ಮವಾಗಿದೆ.

ಅದೃಷ್ಟವಶಾತ್ ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ರೀತಿಯ ತೊಂದರೆಗಳಾಗಿಲ್ಲ. ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ ಅಡ್ಡ ಬಂದಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ರಸ್ತೆ ಮದ್ಯದಲ್ಲಿಯೇ ವಾಹನ ಹತ್ತಿ ಉರಿಯಿತು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!