ರಸ್ತೆ ದುರಸ್ಥಿತಿಗೆ ವಿದ್ಯಾರ್ಥಿಗಳ ಒತ್ತಾಯ

187

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ಪಟ್ಟಣದ ಜಾನುವಾರ ಬಜಾರ್, ಹೊಸನಗರಕ್ಕೆ ಹೋಗುವ ರಸ್ತೆ ತುಂಬಾ ಹದಗಟ್ಟಿದ್ದು, ಈ ಮಾರ್ಗವಾಗಿ ಸಂಚರಿಸುವ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅಲ್ದೇ, ಈ ಮಾರ್ಗದಲ್ಲಿರುವ ಜೆಎಂಜೆ ಇಂಗ್ಲಿಷ್ ಮೀಡಿಯಂ ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ.

ಈ ಬಗ್ಗೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಈ ವೇಳೆ ವಿದ್ಯಾರ್ಥಿಗಳು ಪ್ಲೇ ಕಾರ್ಡ್ ಹಿಡಿದುಕೊಂಡು ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳುವ ಮೂಲಕ ರಸ್ತೆ ದುರಸ್ಥಿಗೆ ಆಗ್ರಹಿಸಿದರು.




Leave a Reply

Your email address will not be published. Required fields are marked *

error: Content is protected !!