ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಇಂಡಿಯನ್ ಕ್ರಿಕೆಟ್ ಟೀಂ ಕ್ಯಾಪ್ಟನ್ ರೋಹಿತ್ ಶರ್ಮಾ ಬಳಗ ಏಷ್ಯ ಕಪ್ ಟೂರ್ನಿಯಲ್ಲಿ ಬ್ಯುಸಿಯಾಗಿದೆ. ಇತ್ತ ಅವರ ಮೊದಲ ನಟನೆಯ ಚಿತ್ರದ ಟ್ರೇಲರ್ ರಿಲೀಸ್ ಗೆ ಸಿದ್ಧವಾಗಿದೆ. ಯೆಸ್, ರೋಹಿತ್ ಶರ್ಮಾ, ಬ್ಯಾಟಿಂಗ್ ಜೊತೆಗೆ ಆ್ಯಕ್ಟಿಂಗ್ ಗೆ ಇಳಿದಿದ್ದಾರೆ.
ಮೇಗಾ ಬ್ಲಾಕ್ ಬಸ್ಟರ್ ಅನ್ನೋ ಚಿತ್ರದಲ್ಲಿ ರೋಹಿತ್ ಶರ್ಮಾ ನಟಿಸುತ್ತಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಬಿಟ್ಟಿದ್ದು, ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಸೆಪ್ಟೆಂಬರ್ 4ರಂದು ಟ್ರೇಲರ್ ರಿಲೀಸ್ ಆಗುತ್ತಿದೆ.
ಈ ಚಿತ್ರದ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿದೆ. ಯಾವುದು ಚಿತ್ರ, ಕಥೆ ಏನು, ಯಾರು ನಿರ್ದೇಶನ ಮಾಡುತ್ತಿದ್ದಾರೆ ಅನ್ನೋ ಹಲವು ಪ್ರಶ್ನೆಗಳು ಮೂಡಿದ್ದು, ಭಾನುವಾರ ಟ್ರೇಲರ್ ರಿಲೀಸ್ ಆದ ಮೇಲೆ ಇದೆಲ್ಲವೂ ತಿಳಿಯಲಿದೆ.