8 ವರ್ಷದಲ್ಲಿ ರೂಪಾಯಿ ಮೌಲ್ಯ 16.8 ರೂ ಕುಸಿತ

249

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ. ಸತತವಾಗಿ ಕುಸಿಯುತ್ತಿರುವ ರೂಪಾಯಿ ಮೌಲ್ಯದಿಂದಾಗಿ ದೇಶದ ಆರ್ಥಿಕ ಸ್ಥಿತಿಯ ಮೇಲಾಗುತ್ತಿದೆ. ಮಂಗಳವಾರಕ್ಕೆ ಡಾಲರ್ ಎದುರು 80 ರೂಪಾಯಿ ದಾಟಿದೆ.

ಸ್ವಾತಂತ್ರ್ಯ ಭಾರತದಲ್ಲಿ ರೂಪಾಯಿ ಮೌಲ್ಯ ಇಷ್ಟೊಂದು ಪ್ರಮಾಣದಲ್ಲಿ ಕುಸಿದಿದೆ. ಕಳೆದ ಎಂಟು ವರ್ಷಗಳಲ್ಲಿ 16.8 ರೂಪಾಯಿ ಕುಸಿತ ಕಂಡಿದೆ ಎಂದು ಸ್ವತಃ ಕೇಂದ್ರ ಸರ್ಕಾರ ಅಧಿವೇಶನದಲ್ಲಿ ಒಪ್ಪಿಕೊಂಡಿದೆ. 2014ರಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬಂದಾಗ ರೂಪಾಯಿ ಮೌಲ್ಯ 63.33 ಇತ್ತು. ಇದೀಗ 80 ರೂಪಾಯಿ ಗಡಿ ದಾಟಿದೆ.




Leave a Reply

Your email address will not be published. Required fields are marked *

error: Content is protected !!