ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ
ಕೀವ್: ಸಂದಾನ ಮಾತುಕತೆಯ ನಡುವೆಯೂ ರಷ್ಯಾ ಯುದ್ಧ ಮುಂದುವರೆಸಿದೆ. ಇದರಿಂದ ಕೆರಳಿ ಕೆಂಡವಾಗಿರುವ ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ, ರಷ್ಯಾವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಿ ಎಂದು ಶ್ವಸಂಸ್ಥೆಗೆ ಒತ್ತಾಯಿಸಿದ್ದಾರೆ.
ಉಕ್ರೇನ್ ರಾಜಧಾನಿ ಕೀವ್ ವಶಪಡಿಸಿಕೊಳ್ಳಲು ರಷ್ಯಾ ಮುನ್ನುಗ್ಗುತ್ತಿದೆ. 14ನೇ ದಿನವೂ ತನ್ನ ಯುದ್ಧ ಮುಂದುವರೆಸಿದೆ. ಸುಮಿ ನಗರದ ಮೇಲೆ ನಡೆಸಿದ ವಾಯುದಾಳಿಯಲ್ಲಿ 22 ನಾಗರೀಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.