ಹಾಸನ: ಸಾಲುಮರದ ತಿಮ್ಮಕ್ಕನವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದ್ರಿಂದ ನಗರದ ಮಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆರೋಗ್ಯದ ಸುಧಾರಣೆಯನ್ನ ನೋಡಿಕೊಂಡು ಡಿಸ್ಚಾರ್ಜ್ ಮಾಡುವ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ಅವರ ದತ್ತು ಪುತ್ರ ಉಮೇಶ ತಿಳಿಸಿದ್ದಾರೆ.