ಸಾಲುಮರದ ತಿಮ್ಮಕ್ಕ ಸಾವಿನ ವದಂತಿ

375

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿಯಾಗಿದ್ದು, ಅವರು ಆರೋಗ್ಯವಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಮಾತನಾಡಿಡುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಅವರ ಸಾಕುಮಗ ಉಮೇಶ ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಜನರಿಗೆ ಅದೇನು ಆತುರವೋ ಬದುಕಿದ್ದವರನ್ನು ಮೃತಪಟ್ಟಿದ್ದಾರೆ ಎಂದು ಹಂಚಿಕೊಂಡು ಬಿಡುತ್ತಾರೆ. ಹೀಗೆ ಪೋಸ್ಟ್ ಹಾಕುವುದಕ್ಕೂ ಮೊದಲು ಹತ್ತು ಸಾರಿ ಸತ್ಯಾಸತ್ಯತೆ ತಿಳಿದುಕೊಳ್ಳಬೇಕು ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!