‘ಏಪ್ರಿಲ್ 30ರಂದು ಸಲ್ಮಾನ್ ಖಾನ್ ಕೊಲ್ಲುತ್ತೇವೆ’

152

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ನಟ ಸಲ್ಮಾನ್ ಖಾನ್ ಕೊಲ್ಲುವ ಬೆದರಿಕೆ ಕರೆಯೊಂದು ಬಂದಿದೆ. ಕಳೆದ ಹಲವು ತಿಂಗಳುಗಳಿಂದ ಸಲ್ಮಾನ್ ಖಾನ್ ಹತ್ಯೆಯ ವಿಚಾರವಾಗಿ ಹಲವು ಘಟನೆಗಳು ನಡೆಯುತ್ತಲೇ ಇವೆ. ಇದೀಗ ಮುಂಬೈ ಪೊಲೀಸರಿಗೆ ರಾಜಸ್ಥಾನದ ಜೋಧಪುರದಿಂದ ಇಂತಹದೊಂದು ಕರೆ ಬಂದಿದೆ ಅನ್ನೋದು ಬೆಳಕಿಗೆ ಬಂದಿದೆ.

ಸೋಮವಾರ ಮುಂಬೈ ಪೊಲೀಸ್ ಕಂಟ್ರೋಲ್ ರೂಮಿಗೆ ಕಾಲ್ ಬಂದಿದೆ. ಜೋಧಪುರದ ರೋಕಿ ಭಾಯ್ ಎಂದು ಹೇಳಿಕೊಂಡ ವ್ಯಕ್ತಿ ಏಪ್ರಿಲ್ 30ರಂದು ನಟ ಸಲ್ಮಾನ್ ಖಾನ್ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಇನ್ನು ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಮನೆಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!