ಐವರು ಚಂದನ ಚೋರರು ಅಂದರ್: 40 ಲಕ್ಷ ಮೌಲ್ಯದ ಶ್ರೀಗಂಧ ವಶ

268

ಪ್ರಜಾಸ್ತ್ರ ಅಪರಾಧ ಸುದ್ದಿ

ಧಾರವಾಡ: ಧಾರವಾಡದ ಅರಣ್ಯ ಇಲಾಖೆ ಸಿಬ್ಬಂದಿ ಬರೊಬ್ಬರಿ 370 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ವಶಪಡಿಸಿಕೊಂಡು ಐದು ಜನ ಚಂದನ ಚೋರರ ಹೆಡೆಮುರಿ ಕಟ್ಟಿದ್ದಾರೆ.

ಶೀಗಿಗಟ್ಟಿ ತಾಂಡಾದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಬೆಂಗಳೂರು ಕಡೆಗೆ ಹೊರಟಿದ್ದ ಟಾಟಾ 207 ಗೂಡ್ಸ್ ಹಾಗೂ ಶಿಫ್ಟ್ ವಾಹನದಲ್ಲಿ ಈ ಶ್ರೀಗಂಧದ ಕಟ್ಟಿಗೆಗಳನ್ನು ಸಾಗಿಸಲಾಗುತ್ತಿತ್ತು. ಈ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಈ ವಾಹನಗಳನ್ನು ಬೆನ್ನಟ್ಟಿ ಐವರು ಆರೋಪಿಗಳು, 370 ಕೆಜಿ ಶ್ರೀಗಂಧ ಹಾಗೂ ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ರಾಯಭಾಗ ತಾಲೂಕಿನ ಕನದಾಳ ಗ್ರಾಮದ ಪರಸಪ್ಪ ಭಜಂತ್ರಿ, ಮಾರುತಿ ಭಜಂತ್ರಿ, ಕಲ್ಲಪ್ಪ ಶಿಂಧೆ, ಮಹಾದೇವ ಮಾಂಗ ಹಾಗೂ ರಾಜು ಭಜಂತ್ರಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಕಳೆದ ಹಲವು ದಿನಗಳಿಂದ ಈ ಶ್ರೀಗಂಧ ರವಾನೆ ಮಾಡುವ ಕೆಲಸ ಮಾಡುತ್ತಿದ್ದರು. ರೇಂಜ್ ಆಫೀಸರ್ ಆರ್.ಎಸ್. ಉಪ್ಪಾರ ಅವರ ನೇತೃತ್ವದಲ್ಲಿ ಎರಡು ತಂಡಗಳನ್ನು ಮಾಡಿಕೊಂಡು ಅರಣ್ಯ ಇಲಾಖೆ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದರು. ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳಾದ ಯಲ್ಲಾ ನಾಯಕ್ ಹಮಾಣಿ ಮತ್ತು ಅರಣ್ಯ ರಕ್ಷಕ ವಿಠ್ಠಲ ಜೋನಿ ಪ್ರಮುಖ ಪಾತ್ರವಹಿಸಿದ್ದರು ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!