ಚಂದನವನ ಡ್ರಗ್ಸ್ ಕೇಸ್: ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ..

205

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಸ್ಯಾಂಡಲ್ ವುಡ್ ಅಂಗಳದಲ್ಲಿ ಮಾದಕ ವಸ್ತು ಜಾಲ ಪ್ರಕರಣ ಸಂಬಂಧ ಹಲವು ನಟ, ನಟಿಯರ ವಿಚಾರಣೆ, ಬಂಧನ ಆಗಿದೆ. ಕೆಲವರು ಜಾಮೀನು ಪಡೆದು ಹೊರ ಬಂದಿದ್ದಾರೆ. ಪೊಲೀಸರು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ನಟಿ, ನಿರೂಪಕಿ ಅನುಶ್ರೀ ಹೆಸರು ಸಹ ಉಲ್ಲೇಖಿಸಲಾಗಿದೆ.

ಡ್ಯಾನ್ಸರ್ ಕಿಶೋರ್ ಶೆಟ್ಟಿ, ನಟಿ ಅನುಶ್ರೀ ಬಗ್ಗೆ ಮಾಹಿತಿ ನೀಡಿದ್ದ. ಹೀಗಾಗಿ ಚಾರ್ಜ್ ಶೀಟ್ ನಲ್ಲಿ ಅವರ ಹೆಸರು ಸೇರಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಯಾರ ಮೇಲೂ ಸಾಫ್ಟ್ ಕಾರ್ನರ್ ಇಲ್ಲ. ಕಾನೂನು ಪ್ರಕಾರ ತಪ್ಪಿತಸ್ಥರೆಲ್ಲರ ಮೇಲೂ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!