ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ

143

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಂಪ್, ವಂಚನೆ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಹೀಗಾಗಿ ಕೆಲ ದಿನಗಳಲ್ಲಿ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಸಧ್ಯ ಈತನ ಪ್ರಕರಣವನ್ನು ಮೈಸೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನವರಿ 25ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಬೇಕೆಂದು ಮೈಸೂರಿನ 6ನೇ ಹೆಚ್ಚುವರಿ ಕೋರ್ಟಿಗೆ ಸರ್ಕಾರ ಪರ ವಕೀಲರು ಮನವಿ ಮಾಡಿದ್ದರು.

ಇದು ಸರ್ಕಾರದ ಕೆಲಸವಾಗಿದೆ. ನಾವು ಮಧ್ಯ ಪ್ರವೇಶ ಮಾಡುವುದಿಲ್ಲವೆಂದು ಕೋರ್ಟ್ ಹೇಳಿತ್ತು. ಇದೀಗ ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆಗೆ ಸರ್ಕಾರ ನಿರ್ದೇಶನ ನೀಡಿದೆ.




Leave a Reply

Your email address will not be published. Required fields are marked *

error: Content is protected !!