ಸರ್ದಾರ್ ವಲ್ಲಭಾಯಿ ಸ್ಟೇಡಿಯಂ ಈಗ ಮೋದಿ ಸ್ಟೇಡಿಯಂ

332

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ವಿಶ್ವದ ಅತಿ ದೊಡ್ಡ ಸ್ಟೇಡಿಯಂ ಎಂದು ಖ್ಯಾತಿ ಹೊಂದಿರುವ ಇಲ್ಲಿನ ಮೊಟೆರಾ ಸ್ಟೇಡಿಯಂನ್ನ ರಾಷ್ಟ್ರಪತಿ ರಾಮನಾಥ ಕೋವಿಂದ್ ಬುಧವಾರ ಉದ್ಘಾಟನೆ ಮಾಡಿದ್ರು. ಇದನ್ನ ನರೇಂದ್ರ ಮೋದಿ ಎಂದು ಮರುನಾಮಕರಣ ಮಾಡಿ ಉದ್ಘಾಟನೆ ಮಾಡಲಾಗಿದೆ.

ವಿಶ್ವದ ಅತಿದೊಡ್ಡ ಕ್ರೀಡಾಂಗಣವೆಂದು ಖ್ಯಾತಿ ಗಳಿಸಿರುವ ಇದು, 1 ಲಕ್ಷದ 10 ಸಾವಿರಕ್ಕೂ ಹೆಚ್ಚು ಜನರು ಕುಳಿತುಕೊಳ್ಳುವ ಸಾಮಾರ್ಥ್ಯ ಹೊಂದಿದೆ. ಈ ಮೊದ್ಲು ಇದು ಸರ್ದಾರ್ ವಲ್ಲಾಭಾಯಿ ಪಟೇಲ್ ಕ್ರೀಡಾಂಗಣವಾಗಿತ್ತು. ಇದೀಗ ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದೆ.

ಇದೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಮೂಲಕ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಶೇಕಡ 50 ರಷ್ಟು ಮಾತ್ರ ಆಸನಕ್ಕೆ ವ್ಯವಸ್ಥೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!