ಸರಿಗಮಪ ಸ್ಪರ್ಧೆ ಆಯೋಜಕರ ವಿರುದ್ಧ ಕೇಸ್

375

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಸರಿಗಮಪ ಸ್ಪರ್ಧೆಯ ಆಯೋಜಕರ ವಿರುದ್ಧ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಕಾರಣ, ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವುದಕ್ಕೆ ಎಫ್ಐಆರ್ ದಾಖಲಾಗಿದೆ.

ಭಾನುವಾರ ರಾತ್ರಿ ಮೈಸೂರು ರಸ್ತೆಯ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಿಗಮಪ 17ನೇ ಸೀಸನ್ ಗ್ರ್ಯಾಂಡ್ ಫಿನಾಲೆ ಆಯೋಜಿಸಲಾಗಿದೆ. ಇದಕ್ಕೆ 100 ಜನರು ಭಾಗವಹಿಸಲಿದ್ದಾರೆ ಎಂದು ಪೊಲೀಸರಿಂದ ಅನುಮತಿ ಪಡೆದಿದ್ದಾರೆ.

ಆದ್ರೆ, ನಿಯಮ ಉಲ್ಲಂಘಿಸಿ ಅದಕ್ಕಿಂತ ಹೆಚ್ಚು ಜನರನ್ನ ಸೇರಿಸಿದ್ದಾರೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸಿರುವುದಿಲ್ಲ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!