ವಿಜಯಪುರ ಜಿಲ್ಲೆಯಾದ್ಯಂತ ವರುಣನ ಅವಾಂತರ

240

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗಮ್ಮಟನಗರಿ ವಿಜಯಪುರ ಜಿಲ್ಲೆಯ ತುಂಬಾ ಶನಿವಾರ ಸಂಜೆ ಭರ್ಜರಿ ಮಳೆಯಾಗಿದೆ. ಸುಮಾರು ಎರಡ್ಮೂರು ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಮಳೆಯಾಗಿದ್ದು, ಹಲವು ಕಡೆ ವರುಣನ ಆರ್ಭಟಕ್ಕೆ ಮರಗಳು ಬಿದ್ದಿವೆ, ತಗ್ಗು ಪ್ರದೇಶಗಳಲ್ಲಿ ನೀರು ನೀಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

ಜಿಲ್ಲೆಯ ಮುದ್ದೇಬಿಹಾಳ, ಕೋಲ್ಹಾರ, ಬಸವನಬಾಗೇವಾಡಿ, ಸಿಂದಗಿ, ದೇವರಹಿಪ್ಪರಗಿ ಇಂಡಿ ಸೇರಿದಂತೆ ಎಲ್ಲೆಡೆ ವ್ಯಾಪಕ ಮಳೆಯಾಗಿದೆ. ಕಳೆದ ಎರಡ್ಮೂರು ದಿನಗಳಿಂದ ವರುಣ ಕಾಣಿಸಿಕೊಳ್ಳುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ.

ವಿಜಯಪುರ ಶಿಕರಖಾನಿ ಗಾಂಧಿನಗರ, ನಾಗಠಾಣ ಮತಕ್ಷೇತ್ರ, ವಾರ್ಡ್ ನಂಬರ್ 15

ಹಲವು ಕಡೆ ಮನೆಗಳು, ಅಂಗಡಿಗಳಿಗೆ ಕೊಳಚೆ ನೀರು ನುಗ್ಗಿದ್ದು, ಜನರು ನೀರು ಹೊರ ಚೆಲ್ಲಲು ಹರಸಾಹಸ ಪಡ್ತಿದ್ದಾರೆ. ಕೊಳಚೆ ಪ್ರದೇಶದ ಜನರಂತೂ ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕ್ತಿದ್ದಾರೆ. ಇನ್ನು ಜೂನ್ 6 ಅಥವ 7ಕ್ಕೆ ರಾಜ್ಯದಲ್ಲಿ ಮುಂಗಾರು ಆಗಮನವಾಗಬಹುದೆಂದು ಎಂದು ಹವಾಮಾನ ಇಲಾಖೆ ಹೇಳಿದೆ. ಇದ್ರಿಂದಾಗಿ ರೈತಾಪಿ ವರ್ಗದಲ್ಲಿ ಸಂತಸ ಮನೆ ಮಾಡಿದೆ.




Leave a Reply

Your email address will not be published. Required fields are marked *

error: Content is protected !!