ಸೆ.28ರಿಂದ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಅವಕಾಶ

190

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಸುಪ್ರಸಿದ್ಧ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಸೆಪ್ಟೆಂಬರ್ 28ರಿಂದ ಅವಕಾಶ ಮಾಡಿಕೊಡಲಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ. ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಉತ್ಸವ, ಜಾತ್ರೆಗೆ ನಿರ್ಬಂಧ ಹೇರಲಾಗಿದೆ.

ಕೋವಿಡ್ 19 ಸೋಂಕಿನ ಕಾರಣಕ್ಕೆ ಕಳೆದ ಒಂದೂವರೆ ವರ್ಷದಿಂದ ದೇವಿ ದರ್ಶನವನ್ನು ನಿರ್ಬಂಧಿಸಲಾಗಿತ್ತು. ಇದೀಗ ಸೆಪ್ಟೆಂಬರ್ 28ರಂದು ಅವಕಾಶ ಕಲ್ಪಿಸಲಾಗಿದೆ. ಭಕ್ತರು ಕೋವಿಡ್ 19 ಮಾರ್ಗಸೂಚಿಗಳನ್ನು ಅನ್ವಯಿಸಬೇಕೆಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!