ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದವನ ಬಂಧನಕ್ಕೆ ಆಗ್ರಹ

148

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ತಡರಾತ್ರಿ ಸಾವರ್ಕರ್ ಫೋಟೋ ಅಂಟಿಸಿ ಹೋಗಲಾಗಿದೆ. ಈ ಸಂಬಂಧ ಕೂಡಲೇ ಆರೋಪಿಯನ್ನು ಬಂಧಿಸಬೇಕೆಂದು ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ ಆಗ್ರಹಿಸಿದ್ದಾರೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಹೂಗಾರ ತಾನೇ ಫೋಟೋ ಅಂಟಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ವಿರುದ್ಧ ದೂರು ದಾಖಲಿಸಲಾಗುವುದು. ಕೂಡಲೇ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದು, ಬಂಧಿಸದೆ ಹೋದರೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.




Leave a Reply

Your email address will not be published. Required fields are marked *

error: Content is protected !!