ಸುಪ್ರೀಂ ಕೋರ್ಟ್ ನ್ಯಾ.ಶಾಂತನಗೌಡರ ನಿಧನಕ್ಕೆ ಸಿಎಂ ಸಂತಾಪ

202

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರ್ನಾಟಕ ಮೂಲದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ ಎಂ ಶಾಂತನಗೌಡರ ಭಾನುವಾರ ನಿಧನರಾಗಿದ್ದಾರೆ. ಶ್ವಾಸಕೋಶ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನ, ಗುರುಗ್ರಾಮ್ ದ ವೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಹಾವೇರಿ ಜಿಲ್ಲೆಯವರಾಗಿರುವ ಮೋಹನ ಶಾಂತಗೌಡರ, ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!