ಉರುಳಿ ಬಿದ್ದ ಶಾಲಾ ಬಸ್: 6 ವಿದ್ಯಾರ್ಥಿಗಳ ಸಾವು

72

ಪ್ರಜಾಸ್ತ್ರ ಸುದ್ದಿ

ಚಂಡೀಗಢ: ಶಾಲಾ ಬಸ್ಸೊಂದು ಉರುಳಿ ಬಿದ್ದ ಪರಿಣಾಮ 6 ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಹೇಂದ್ರಗಢದಲ್ಲಿ ಗುರುವಾರ ನಡೆದಿದೆ.

ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಬಸ್ ಚಾಲಕ ಮದ್ಯಪಾನ ಮಾಡಿದ್ದ ಅನ್ನೋ ಶಂಕೆ ಸಹ ಇದೆ. ಆತನನ್ನು ವಶಕ್ಕೆ ಪಡೆಯಲಾಗಿದ್ದು, ವೈದ್ಯಕೀತ ತಪಾಸಣೆ ಬಳಿಕ ತಿಳಿದು ಬರಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಿಯಾಣದ ಶಿಕ್ಷಣ ಸಚಿವೆ ಸೀಮಾ ತ್ರಿಕಾ ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!