ಜಮಖಂಡಿ ಶಾಲಾ ಬಸ್ ಅಪಘಾತ ಪ್ರಕರಣ: ಸಿಎಂ ಪರಿಹಾರ ಘೋಷಣೆ

178

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಹತ್ತಿರ ಭಾನುವಾರ ತಡರಾತ್ರಿ ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ. ಶಾಲಾ ಮಕ್ಕಳ ಸಾವಿನ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಾಗಿದ್ದ ಚಿಕ್ಕ ಮಕ್ಕಲು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!