ಶಾಲಾ ಬಸ್-ಗೂಡ್ಸ್ ವಾಹನ ಅಪಘಾತ: ಇಬ್ಬರ ಸಾವು

217

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಜಿಲ್ಲೆಯ ಅಥಣಿಯಲ್ಲಿ ಶಾಲಾ ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ. ಮೀರಜ್ ರಸ್ತೆಯಲ್ಲಿ ಈ ಒಂದು ದುರಂತ ಸಂಭವಿಸಿದೆ.

ಬನಜವಾಡ ಸಂಸ್ಥೆಗೆ ಸೇರಿದ ಶಾಲೆಯ ವಾಹನ ಇದಾಗಿದ್ದು, ಇಬ್ಬರು ಚಾಲಕರು ಮೃತಪಟ್ಟಿದ್ದು 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!