ನಾಳೆಯಿಂದ ಶಾಲಾ, ಕಾಲೇಜು ಪ್ರಾರಂಭ: ಶಿಕ್ಷಣ ಸಚಿವರು ಏನಂದರು?

233

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಹಾವಳಿಯಿಂದ ಕಳೆದ ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಶಾಲಾ, ಕಾಲೇಜುಗಳು ಪ್ರಾರಂಭವಾಗಿರ್ಲಿಲ್ಲ. ಸೋಂಕಿನ ಪ್ರಮಾಣ ಕಡಿಮೆಯಾಗ್ತಿರುವುದ್ರಿಂದ ಆಗಸ್ಟ್ 23ರಿಂದ 9ನೇ ತರಗತಿಯಿಂದ 12ನೇ ತರಗತಿವರೆಗೂ ಕ್ಲಾಸ್ ಪ್ರಾರಂಭವಾಗುತ್ತಿವೆ.

ಟಾಸ್ಕ್ ಪೋರ್ಸ್ ಸಮಿತಿ ಹಾಗೂ ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಶಾಲಾ, ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ ಈಗಾಗ್ಲೇ ಶಾಲಾ, ಕಾಲೇಜುಗಳಿಗೆ ಸ್ಯಾನ್ ಟೈಸಿಂಗ್ ಮಾಡಲಾಗಿದೆ. ಈ ಸಂಬಂಧ ಪ್ರತಿಯೊಂದು ಜಿಲ್ಲೆ, ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ.

ಕೋವಿಡ್ ಮಾರ್ಗಸೂಚಿ ಅನ್ವಯ ತರಗತಿಗಳು ನಡೆಯಲಿವೆ. ಒಂದು ಕೋಣೆಯಲ್ಲಿ 15-20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಸಧ್ಯಕ್ಕೆ ಸೋಮವಾರದಿಂದ ಶುಕ್ರವಾರದವರೆಗೆ ಮಧ್ಯಾಹ್ನ 1.30ರ ವರೆಗೆ ಮಾತ್ರ ಶಾಲೆ ಇರಲಿದೆ. ಶನಿವಾರ 12.30ರ ತನಕ ನಡೆಯಲಿದೆ. ಇನ್ನು ಹಾಜರಾತಿ ಕಡ್ಡಾಯವಲ್ಲವೆಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!