ಆ.23ರಿಂದ ಶಾಲಾ ಕಾಲೇಜು ಪ್ರಾರಂಭ, ನೈಟ್ ಕರ್ಫ್ಯೂ ಜಾರಿ

578

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆಗಸ್ಟ್ 23ರಿಂದ ರಾಜ್ಯದಲ್ಲಿ ಪ್ರೌಢ ಶಾಲೆ ಹಾಗೂ ಕಾಲೇಜುಗಳು ಪ್ರಾರಂಭ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 9ನೇ ತರಗತಿಯಿಂದ 12ನೇ ತರಗತಿ ವರೆಗೆ ಶಾಲಾ, ಕಾಲೇಜುಗಳನ್ನ ಪ್ರಾರಂಭ ಮಾಡಬಹುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಗಡಿ ಜಿಲ್ಲೆಗಳಲ್ಲಿ ಕರೋನಾ ನಿಯಂತ್ರಣ ಸಂಬಂಧ ಕಟ್ಟುನಿಟ್ಟು ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಇದರ ಜೊತೆಗೆ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ನೈಟ್ ಕರ್ಫ್ಯೂ ಇರಲಿದೆ. ಗಡಿ ಜಿಲ್ಲೆಗಳಲ್ಲಿ ಪಾಸಿಟಿವ್ ರೇಟ್ ನೋಡಿಕೊಂಡು ವೀಕೆಂಡ್ ಕರ್ಫ್ಯೂ ಸಹ ಜಾರಿ ಮಾಡಲಾಗುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!