ಬೋಧನಾ ಶುಲ್ಕದಲ್ಲಿ ಶೇ.15ರಷ್ಟು ರಿಯಾಯಿತಿಗೆ ಆದೇಶ

299

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇಕಡ 15ರಷ್ಟು ರಿಯಾಯಿತಿ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ಈ ಆದೇಶ ನೀಡಲಾಗಿದೆ. ಈ ಮೂಲಕ ಖಾಸಗಿ ಶಾಲೆಗಳಿಗೆ ಹಾಗೂ ಪೋಷಕರಿಗೆ ಸ್ವಲ್ಪ ನೆಮ್ಮದಿ ಸಿಕ್ಕಿದೆ.

ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇಕಡ 70ರಷ್ಟು ಸ್ವೀಕರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಈ ಸಂಬಂಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ಸರ್ಕಾರದ ಆದೇಶ ರದ್ದು ಪಡಿಸಿ, ಶೇಕಡ 15ರಷ್ಟು ರಿಯಾಯಿತಿ ನೀಡಿದೆ.




Leave a Reply

Your email address will not be published. Required fields are marked *

error: Content is protected !!