ಶಾಲೆ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ

376

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಶಾಲೆಯ ಮೇಲ್ಛಾವಣಿ ಕುಸಿದುಬಿದ್ದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಗ್ರಾಮದಲ್ಲಿ ನಡೆದಿದೆ. ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇಲ್ಲಿನ ಗ್ರಾಮದ ಸರ್ಕಾರಿ ಶಾಲೆಯಲ್ಲಿ 1-8ನೇ ತರಗತಿವರೆಗೂ ನೂರಾರು ಮಕ್ಕಳು ಅಭ್ಯಾಸ ಮಾಡುತ್ತಾರೆ. ಘಟನೆಯಿಂದ ವಿದ್ಯಾರ್ಥಿಗಳು ಭಯಭೀತಗೊಂಡು ಹೊರಗೆ ಓಡಿ ಬಂದಿದ್ದಾರೆ. ಶಿಕ್ಷಣ ಇಲಾಖೆಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!