ಶಾಲಾ ಪ್ರವಾಸ ಬಸ್ ಪಲ್ಟಿ: ಪಾರಾದ 45 ಮಕ್ಕಳು

165

ಪ್ರಜಾಸ್ತ್ರ ಸುದ್ದಿ

ಹಾವೇರಿ: ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೊರಟಿದ್ದ ಸರ್ಕಾರಿ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಅಲ್ಲಿಪೂರು ಕ್ರಾಸ್ ಹತ್ತಿರ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ಮಕ್ಕಳನ್ನು ಸವಣೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ರಾಕ್ ಗಾರ್ಡನ್ ಕಡೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!