ಅಫಜಲಪುರದಲ್ಲಿ ಶಾಲೆ ಗೋಡೆ ಕುಸಿತ: ಅದೃಷ್ಟವಶಾತ್ ಮಕ್ಕಳು ಪಾರು

129

ಪ್ರಜಾಸ್ತ್ರ ಸುದ್ದಿ

ಅಫಜಲಪುರ: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಆನೂರದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆಯೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮಕ್ಕಳಿಗೆ ಯಾವುದೇ ಅನಾಹುತವಾಗಿಲ್ಲ.

ಬೆಂಚಿನ ಪಕ್ಕದಲ್ಲಿನ ಗೋಡೆ ಸಂಪೂರ್ಣವಾಗಿ ಕುಸಿದಿದೆ. ಇದರಿಂದಾಗಿ ವಿದ್ಯಾರ್ಥಿಗಳು ಜೀವ ಭಯದಲ್ಲಿ ಎದ್ನೋ ಬಿದ್ನೋ ಎಂದು ಓಡಿವೆ. ಸ್ವಲ್ಪದರಲ್ಲಿ ಅನಾಹುತವೊಂದು ತಪ್ಪಿದೆ. ಇಲ್ಲಿನ 12 ರೂಮುಗಳಲ್ಲಿ 8 ರೂಮುಗಳು ಶಿಥಿಲಾವಸ್ಥೆಯಲ್ಲಿವೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಅನ್ನೋದು ಶಿಕ್ಷಕರ ಗೋಳು.

ಉತ್ತಮವಾದ ಶಿಕ್ಷಣ ನೀಡುವಲ್ಲಿ ಸರ್ಕಾರ ಯಡವುತ್ತಿದೆ. ಜೊತೆಗೆ ಉತ್ತಮ ಗುಣಮಟ್ಟದ ಶಾಲೆಗಳನ್ನು ಸಹ ನೀಡದೆ ಮಕ್ಕಳ ಜೀವದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leave a Reply

Your email address will not be published. Required fields are marked *

error: Content is protected !!