ಜಾರಕಿಹೊಳಿ ಮನೆಯಲ್ಲಿ 7 ಮಠಾಧೀಶರ ಗೌಪ್ಯ ಸಭೆ

204

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಬಿಜೆಪಿ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಎಸ್ಸಿ, ಎಸ್ಟಿ ಸಮುದಾಯದ 7 ಜನ ಮಠಾಧೀಶರು ಸೋಮವಾರ ಸಭೆ ನಡೆಸಿದ್ದಾರೆ. ಮಾಧ್ಯಮದವರನ್ನು ಹೊರಗೆ ಕಳುಹಿಸಿ ರಮೇಶ್ ಜಾರಕಿಹೊಳಿ, ಸಹೋದರ ಲಖನ್ ಜಾರಕಿಹೊಳಿ ಅವರೊಂದಿಗೆ ಸ್ವಾಮೀಜಿಗಳು ಗೌಪ್ಯ ಸಭೆ ನಡೆಸಿದ್ದಾರೆ.

ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ಮೇದಾರ ಕೇತೇಶ್ವರ ಗುರುಪೀಠದ ಬಸವಪ್ರಭು ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಶಿವಶರಣ ಮಾದಾರಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಬಂಜಾರಾ ಗುರುಪೀಠದ ಸಂತ ಸೇವಾಲಾಲ ಸ್ವಾಮೀಜಿ, ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮೀಜಿ ಅವರೊಂದಿಗೆ ಗೌಪ್ಯ ಸಭೆ ನಡೆಸಲಾಯಿತು.




Leave a Reply

Your email address will not be published. Required fields are marked *

error: Content is protected !!