ಪಾಪು ಆಸ್ಪತ್ರೆಗೆ ದಾಖಲು

386

ಹುಬ್ಬಳ್ಳಿ: ನಾಡಿನ ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಪಾಟೀಲ ಪುಟ್ಟಪ್ಪನವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯನ್ನ ಅನುಭವಿಸ್ತಿರುವ ಪಾಟೀಲ ಪುಟ್ಟಪ್ಪನವರನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಪಾಟೀಲ ಪುಟ್ಟಪ್ಪನವರು ಬಳಲುತ್ತಿದ್ದು, ಅವರನ್ನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆಯೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರ ಮಾಹಿತಿ ಇದೀಗ ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!