ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಕಣ್ಮರೆ

73

ಪ್ರಜಾಸ್ತ್ರ ಸುದ್ದಿ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ. ನಿರ್ಮಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಪ್ತಾಪುರದ ದುರ್ಗದ ಕಾಲೋನಿಯಲ್ಲಿರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಿ.ಕೆ ಲೋಣಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ, ಧಾರವಾಡದಲ್ಲಿಯೇ ಬದುಕು ಕಟ್ಟಿಕೊಂಡಿದ್ದರು.

ಅಕ್ಕಮಹಾದೇವಿ, ಬಸವೇಶ್ವರ, ಹಲಸಂಗಿ ಗೆಳೆಯರು, ಅರವಿಂದರು ಅನ್ನೋ ಕೃತಿಗಳು ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ. ಹಲವು ಗೌರವ, ಪುರಸ್ಕಾರಗಳು ಇವರಿಗೆ ಸಂದಿವೆ. ಕರ್ನಾಟಕ ಸಾಹಿತ್ಯ ಅಕಾಡಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ನಿಧನಕ್ಕೆ ಸಾಹಿತ್ಯ ವಲಯದವರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!