ಹಿರಿಯ ಚಿಂತಕ ಜಿ.ರಾಜಶೇಖರ್ ನಿಧನ

135

ಪ್ರಜಾಸ್ತ್ರ ಸುದ್ದಿ

ಉಡುಪಿ: ಹಿರಿಯ ಸಾಹಿತಿ, ಚಿಂತಕ ಜಿ.ರಾಜಶೇಖರ್ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 75 ವರ್ಷದ ಜಿ.ರಾಜಶೇಖರ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

2019ರಿಂದ ಪ್ರೊಗ್ರೆಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ ಅನ್ನೋ ಅಪರೂಪದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸಾಮಾಜಿಕ ಚಳವಳಿ, ಕರಾವಳಿ ಭಾಗದಲ್ಲಿ ಕೋಮು ಸೌಹಾರ್ದತೆಗೆ ಹೋರಾಟ ನಡೆಸಿಕೊಂಡು ಬಂದಿದ್ದರು.

ಜಿ.ರಾಜಶೇಖರ್ ನಿಧನಕ್ಕೆ ಸಾಹಿತಿಗಳು, ಚಿಂತಕರು, ರಾಜಕಾರಣಿಗಳು, ಅವರ ಶಿಷ್ಯರು, ಬಂಧು ಮಿತ್ರರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!